DistrictsPolitics

ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲು ಸಿದ್ಧ; ವಿಜಯೇಂದ್ರ

ಮೈಸೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗೇನಾದರೂ ಆದರೆ ಅವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚಿಸಿದರೆ ನಾನು ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಈ ವಿಚಾರ ತಿಳಿಸಿದರು.

ಪಕ್ಷ ನನಗೆ ಯಾವುದೇ ಸವಾಲು ಕೊಟ್ಟರೂ ಅದನ್ನು ಸ್ವೀಕರಿಸುತ್ತಾನೆ. ಸಮರ್ಥವಾಗಿ ನಿಭಾಯಿಸಲು ಶಕ್ತನಾಗಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.‌ ಜೊತೆಗೆ ವರುಣಾದಲ್ಲಿ ಸ್ಪರ್ಧಿಸುವ ಆಸೆಯನ್ನೂ ವಿಜಯೇಂದ್ರ ವ್ಯಕ್ತಪಡಿಸಿದರು.

Share Post