ತಮಿಳುನಾಡಿಗೆ ನಿರಂತರ ನೀರು; ಪ್ರತಿಭಟನೆಗೆ ಮುಂದಾದ ರೈತರು
ಮಂಡ್ಯ; ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಲಾಗುತ್ತಿದೆ. ಇದಕ್ಕೆ ಮಂಡ್ಯದ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದ್ದಾರೆ. ಇಂದು ಕೆಆರ್‌ಎಸ್ ಗೇಟ್ ಬಳಿಯೇ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.
ಭಾನುವಾರ ಕೆಆರ್‌ಎಸ್ ಡ್ಯಾಂನಿಂದ 5,238 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿತ್ತು. ಅನಂತರ ಮಂಗಳವಾರದ ವೇಳೆಗೆ ಅದನ್ನು 8,590 ಕ್ಯೂಸೆಕ್ ಗೆ ಏರಿಸಲಾಯಿತು. ಬುಧವಾರ 9,136 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಅನಂತರ ಗುರುವಾರವೂ ಕೂಡಾ 13,473 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೈತರು ಆಕ್ರೋಶ ಹೊರಹಾಕಿದ್ದಾರೆ.
ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ ನೀರು ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದ್ರೆ ರೈತರು ಹೀಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ನಮಗೆ ಕಡಿಮೆಯಾಗುತ್ತದೆ ಎಂದು ಹೇಳುತ್ತಿದ್ದಾರೆ.