ಹಾಸ್ಟೆಲ್ ನಲ್ಲಿದ್ದ ೧೨ ಮಕ್ಕಳಿಗೆ ಕೊರೋನಾ ಪಾಸಿಟಿವ್
ಮಂಡ್ಯ: ರಾಜ್ಯದಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ಹತೋಟಿಗೆ ತರಲು ಕಠಿಣ ಕ್ರಮ ವಿಧಿಸಿದೆ. ಎಲ್ಲ ಜಿಲ್ಲೆಯಲ್ಲೂ ಸಹ ಕೊರೋನಾ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದೀಗ ಮಂಡ್ಯ ಜಿಲ್ಲೆಯ ನಾಗಮಂಗಲದ ಕಂಬದಹಳ್ಳಿಯ ಒಂದೇ ಹಾಸ್ಟೆಲ್‌ನ 12 ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಶ್ರೀ ಪ್ರಗತಿ ವಿದ್ಯಾ ಸಂಸ್ಥೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹಾಸ್ಟಲ್ ನಲ್ಲಿ ಒಬ್ಬ ವಿದ್ಯಾರ್ಥಿಗೆ ಜ್ವರ, ಶೀತ ಕಂಡಬಂದಿತ್ತು. ಈ ಹಿನ್ನೆಯೆಲ್ಲಿ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ದೃಢಪಟ್ಟಿದೆ. ಬಳಿಕ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿಗಳಿಗೂ ಕೊರೋನಾ ಪರೀಕ್ಷೆ ಒಳಪಡಿಸಲಾಗಿತ್ತು. ಅದರಲ್ಲಿ ೪೩ ಮಕ್ಕಳ ಪೈಕಿ ೧೨ ಮಕ್ಕಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಸದ್ಯ
ಸೋಂಕಿತ ಮಕ್ಕಳು ನಾಗಮಂಗಲದ ಕೋವಿಡ್ ಸೆಂಟರ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಇನ್ನು ಸೋಂಕಿತ ಮಕ್ಕಳು ಟೆಸ್ಟ್ ಗೂ ಮುನ್ನ ಶಾಲೆಗೆ ತೆರಳಿದ್ದ ಹಿನ್ನೆಲೆಯಲ್ಲಿ ಶ್ರೀ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವ 490 ಮಕ್ಕಳಿಗೂ ಟೆಸ್ಟ್ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಶಾಲೆಯಲ್ಲಿ ಒಟ್ಟು 1ರಿಂದ10ನೇ ತರಗತಿವರೆಗೆ 490 ಮಕ್ಕಳ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಆತಂಕಗೊಂಡ ಶಾಲಾ ಮಂಡಳಿ ಇದೀಗ ಅವರಿಗೂ ಕೊರೋನಾ ಟೆಸ್ಟ್ ಮಾಡಿಸಲು ಮುಂದಾಗಿದ್ದಾರೆ.