ಗೃಹಲಕ್ಷ್ಮೀ ಯೋಜನೆ ಜಾರಿಗೆ ಕ್ಷಣಗಣನೆ; ಮೈಸೂರಿನಲ್ಲಿ ಲಕ್ಷಾಂತರ ಜನರ ಸಮಾಗಮ
ಮೈಸೂರು; ಮೈಸೂರಿನಲ್ಲಿ ಇಂದು ಗೃಹಲಕ್ಷ್ಮೀ ಯೋಜನೆ ಜಾರಿಗೆ ಕ್ಷಣಗಣನೆ ಶುರುವಾಗಿದೆ. ರಾಹುಲ್ ಗಾಂಧಿ ಬೆಂಗಳೂರಿನಿಂದ ಮೈಸೂರಿನತ್ತ ಹೊರಟಿದ್ದು, ರಾಹುಲ್ ಗಾಂಧಿ ಆಗಮಿಸಿದ ತಕ್ಷಣ ಯೋಜನೆಗೆ ಚಾಲನೆ ನೀಡಲಾಗುತ್ತದೆ. ರಾಹುಲ್ ಗಾಂಧಿ ಸ್ವಾಗತ ಸಿದ್ಧತೆಗಳು ನಡೆದಿವೆ. ಇನ್ನೊಂದೆಡೆ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಆಗಮಿಸಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಯಡಿ ಸುಮಾರು ೧ ಕೋಟಿ ೧೧ ಲಕ್ಷ ಮಹಿಳೆಯರು ನೋಂದಾಯಿಸಿಕೊಂಡಿದ್ದು, ಅವರಿಗೆಲ್ಲಾ ಇಂದಿನಿಂದ ಹಣ ವರ್ಗಾವಣೆಯಾಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.