ಮನೆಗೆ ಬೆಂಕಿ ತಗುಲಿ ದಂಪತಿ ಸಜೀವ ದಹನ
ಯಾದಗಿರಿ; ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆ ಸೈದಾಪುರ ಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ಗ್ರಾಮದ ಶಿಲ್ಪಾ ಹಾಗೂ ರಾಗಯ್ಯ ದಂಪತಿ ಬೆಂಕಿಗಾಹುತಿಯಾದವರು. ಇವರು ಮನೆಯಲ್ಲಿಯೇ ಬಟ್ಟೆ ಅಂಗಡಿ ನಡೆಸುತ್ತಿದ್ದರು. ಇಂದು ಬೆಳಗಿನ ಜಾವದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಸ್ ಆಗಿದ್ದು, ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಟ್ಟೆಗಳು ಇದ್ದಿದ್ದರಿಂದ ಬಹುಬೇಗ ಬೆಂಕಿ ಇಡೀ ಮನೆಯನ್ನು ಆವರಿಸಿದೆ. ಇದರಿಂದಾಗಿ ದಂಪತಿ ಮನೆಯಿಂದ ಹೊರಬರಲಾರದೆ ಅಲ್ಲೇ ಸಾವನ್ನಪ್ಪಿದ್ದಾರೆ.
ಮನೆಯ ಮೊದಲ ಮಹಡಿಯಲ್ಲಿ ಈ ದುರ್ಘಟನೆ ನಡೆದಿದೆ. ಅದೃಷ್ಟವಶಾತ್ ಮೃತ ದಂಪತಿಯ ಮಕ್ಕಳ ಪ್ರಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರು ಮಕ್ಕಳೂ ಅಜ್ಜ-ಅಜ್ಜಿಯ ಜೊತೆ ಕಳೆ ಮಹಡಿಯಲ್ಲಿ ಮಲಗಿದ್ದರು. ಹೀಗಾಗಿ ಅವರು ಬಚಾವಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.