ಸಿ.ಟಿ.ರವಿಗೆ ತೀವ್ರ ಹೊಟ್ಟೆನೋವು; ಆಸ್ಪತ್ರೆಗೆ ದಾಖಲು
ಚಿಕ್ಕಮಗಳೂರು; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಸಿ.ಟಿ.ರವಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಇಳಿದುಬಂದಿದೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿ.ಟಿ.ರವಿಯವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿಯೇ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆ ಸೇರಿಸಲಾಗಿದೆ. ಕಿಡ್ನಿಯಲ್ಲಿ 12 ಎಂಎಂ ಕಲ್ಲು ಇರುವುದರಿಂಧ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.