CrimeDistricts

ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಸ್ಯಾಟಲೈಟ್‌ ಫೋನ್‌ ಬಳಕೆ; ಹೆಚ್ಚಿದ ತನಿಖೆ

ಮಂಗಳೂರು; ಕರಾವಳಿಯಲ್ಲಿ ಸ್ಯಾಟಲೈಟ್‌ ಫೋನ್‌ಗಳ ಬಳಕೆ ಬಗ್ಗೆ ಆಗಾಗ ಕೇಳುತ್ತಿರುತ್ತೇವೆ. ವರ್ಷದ ಹಿಂದೆ ಕೂಡಾ ಈ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಇದೀಗ ಮತ್ತೆ ಕರಾವಳಿಯಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮೊದಲು ಸ್ಟಾಟಲೈಟ್‌ ಫೊನ್‌ ಬಳಕೆ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆಯನ್ನೂ ತೀವ್ರಗೊಳಿಸಿದ್ದಾರೆ. 

ನವೆಂಬರ್‌ 19  ಸಂಜೆ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಗಿತ್ತು. ಆದ್ರೆ ಅದಕ್ಕೂ ಹಿಂದಿನ ದಿನ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ ಎಂದು ತನಿಖೆ ವೇಳೆ ಗೊತ್ತಾಗಿದೆಯಂತೆ. ಅರಣ್ಯ ಪ್ರದೇಶದಲ್ಲಿ ನಿಷೇಧಿತ ತುರಾಯ ಕಂಪನಿಯ ಸ್ಯಾಟಲೈಟ್ ಫೋನ್ ಬಳಸಲಾಗಿದೆಯಂತೆ. ಆ ಜಾಗವನ್ನು ಬೇಹುಗಾರಿಕಾ ಸಂಸ್ಥೆಗಳು ಪತ್ತೆ ಮಾಡಿವೆ ಎನ್ನಲಾಗ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ 2, ಉಡುಪಿಯ 1 ಕಡೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಒಮ್ಮೆ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ ಎನ್ನಲಾಗಿದೆ.

Share Post