ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರ ನೇಮಕಕ್ಕೆ ತೀರ್ಮಾನ
ಚಿತ್ರದುರ್ಗ; ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಸೇರಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡಲು ಮಾಜಿ ಸಚಿವ ಏಕಾಂತಯ್ಯ ನೇತೃತ್ವದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಇಂದು ಚಿತ್ರದುರ್ಗದಲ್ಲಿ ಲಿಂಗಾಯತ ನಾಯಕರ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಹೊಸ ಪೀಠಾಧ್ಯಕ್ಷರ ನೇಮಕದ ತೀರ್ಮಾನ ಮಾಡಲಾಗಿದೆ.
ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಮುಖಂಡರೆಲ್ಲರೂ ತೀರ್ಮಾನಿಸಿದ್ದಾರೆ. ಶೀಘ್ರದಲ್ಲೇ ಮುಖಂಡರು ಸಿಎಂ ಭೇಟಿಯಾಗಿ ಈ ಬಗ್ಗೆ ಮನವಿ ಮಾಡಲಿದ್ದಾರೆ.