Districts

ಪಠ್ಯ ಪರಿಷ್ಕರಣೆ ವಿಚಾರ; ನನ್ನ ಕಥನ ಬೇಡ ಎಂದ ದೇವನೂರು ಮಹದೇವ

ಮೈಸೂರು; ಶಾಲಾ ಪಠ್ಯ ಪರಿಷ್ಕರಣೆ ವಿಚಾರವಾಗಿ ವಿವಾದ ಏರ್ಪಟ್ಟಿದೆ. ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ಧ ಹಲವು ವಿಚಾರವಾಗಿ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಬೆನ್ನಲ್ಲೇ ಸಾಹಿತಿ ದೇವನೂರು ಮಹದೇವ ಅವರು ಕೂಡಾ ಕಠಿಣ ನಿಲುವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ದೇವನೂರು ಮಹದೇವ ಅವರು, ಪಠ್ಯ ಪುಸ್ತಕ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್‌ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈಬಿಡುವುದು ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ದೇವನೂರು ಮಹದೇವ ಅವರು ಹೇಳಿದ್ದಾರೆ. ಜೊತೆಗೆ ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

 

Share Post