ಪಿಎಫ್ಐನ ಕೊಪ್ಪಳ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ಅರೆಸ್ಟ್
ಕೊಪ್ಪಳ; ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ದೇಶಾದ್ಯಂತ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ. ಕರ್ನಾಟಕದಲ್ಲೂ ದಾಳಿ ಮಾಡಲಾಗಿದ್ದು, ಕೊಪ್ಪಳ ಜಿಲ್ಲೆ ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪೊಲೀಸರು ಗಂಗಾವತಿ ನಗರದಲ್ಲಿರುವ ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ನನ್ನು ಬಂಧಿಸಿದ್ದಾರೆ. ಎಸ್ಪಿ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಅಬ್ದುಲ್ ಫೈಯಾಜ್ನನ್ನು ಬಂಧಿಸಿ ನಂತರ ಗಂಗಾವತಿಯಿಂದ ಬೆಂಗಳೂರಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿದ್ದಾರೆ.
ಇನ್ನು ಹತ್ತಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ನಡೆಸಲಾಗುತ್ತಿದೆ.