DistrictsPolitics

ಡಿ.ಕೆ.ಶಿವಕುಮಾರ್‌ ಸ್ವಾಗತಕ್ಕೆ ಬರಲಿಲ್ಲ ಶಾಸಕರು, ಸಚಿವರು; ಯಾಕೆ ಹೀಗಾಯ್ತು..?

ಬೆಳಗಾವಿ; ತಮ್ಮ ಜಿಲ್ಲೆಯ ರಾಜಕೀಯದಲ್ಲಿ ಅನಗತ್ಯವಾಗಿ ಬೇರೆಯವರು ಮೂಗು ತೂರಿಸುತ್ತಿದ್ದಾರೆ. ಜೊತೆಗೆ ಪಕ್ಷದ ನಿರ್ಧಾರಗಳಲ್ಲಿ ನನ್ನನ್ನು ಪರಿಗಣಿಸುತ್ತಿಲ್ಲ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಸಮಾಧಾನಗೊಂಡಿರುವುದು ಗೊತ್ತೇ ಇದೆ. ಹೀಗಿರುವಾಗಲೇ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಇಂದು ಬೆಳಗಾವಿಗೆ ಭೇಟಿ ನೀಡಿದ್ದು, ಈ ವೇಳೆ ಅವರನ್ನು ಸ್ವಾಗತಿಸಲು ಶಾಸಕರಾಗಲೀ, ಸಚಿವರಾಗಲೀ ಬರದಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ.ಕೆ.ಶಿವಕುಮಾರ್‌ರನ್ನು ಸ್ವಾಗತಿಸಲು ಯಾರೂ ಬಂದಿರಲಿಲ್ಲ. ಯಾಕಂದ್ರೆ, ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರಿನಲ್ಲಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಕಾರ್ಯಕ್ರಮ ನಿಮಿತ್ತ ಭದ್ರಾವತಿಗೆ ಹೋಗಿದ್ದಾರೆ. ಬೆಳಗಾವಿಯ 11 ಕಾಂಗ್ರೆಸ್ ಶಾಸಕರು ಕೂಡಾ ಬೆಳಗಾವಿಯಲ್ಲಿ ಇಲ್ಲ. ಹೀಗಾಗಿ ಡಿಕೆಶಿ ಸ್ವಾಗತಿಸಲು ಯಾರೂ ಬಂದಿಲ್ಲ ಎನ್ನಲಾಗಿದೆ.

ಅಥಣಿ ಶಾಸಕ ಲಕ್ಷ್ಮಣ ಸವದಿ, ಕಾಗವಾಡ ಶಾಸಕ ರಾಜುಕಾಗೆ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ, ರಾಮದುರ್ಗ ಶಾಸಕ ಅಶೋಕ್ ಪಟ್ಟಣ, ಸವದತ್ತಿ ಶಾಸಕ ವಿಶ್ವನಾಥ ವೈದ್ಯ, ಬೆಳಗಾವಿ ಶಾಸಕ ರಾಜು ಶೇಠ್ ಹಾಗೂ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಇವರೆಲ್ಲಾ ಬೆಂಗಳೂರಿನಲ್ಲಿದ್ದಾರೆ. ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಅನಾರೋಗ್ಯದ ಕಾರಣ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

Share Post