DK Shivakumar; ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿಯಾಗಿದೆ; ಡಿ.ಕೆ.ಶಿವಕುಮಾರ್
ಬೆಂಗಳೂರು; ಕಾಂಗ್ರೆಸ್ ಪ್ರಣಾಳಿಕೆ ನೀಡಿ ಬಿಜೆಪಿಯವರಿಗೆ ಗಾಬರಿಯಾಗಿದೆ. ಹೀಗಾಗಿಯೇ ಅವರು ದೇವರ ಹೆಸರು ಮುಂದಿಟ್ಟುಕೊಂಡು ರಾಜಕೀಯ ಮಾಡಲು ಶುರು ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಮಾಜದ ಶಾಂತಿ ಕದಡುವ ಸಂಘಟನೆಗಳನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿದ್ದೇವೆ. ಇದರಿಂದ ಬಿಜೆಪಿಯವರು ಗಾಬರಿಗೊಂಡಿದ್ದಾರೆ. ಆಂಜನೇಯನ ಹೆಸರಿನಲ್ಲಿ ರಾಜಕೀಯ ಮಾಡಲು ಶುರು ಮಾಡಿದ್ದಾರೆ. ಆದ್ರೆ ಬಜರಂಗದಳಕ್ಕೂ ಆಂಜನೇಯನಿಗೂ ಸಂಬಂಧವೇ ಇಲ್ಲ ಎಂದು ಹೇಳಿದರು.
ಆಂಜನೇಯನಿಗೂ ಬಜರಂಗದಳಕ್ಕೂ ವ್ಯತ್ಯಾಸ ಇದೆ ಅಲ್ಲವೇ ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ್, ಹನುಮಂತ ಎಂದು ಹೆರಿಟ್ಟುಕೊಂಡವರೆಲ್ಲಾ ಆಂಜನೇಯ ಆಗೋದಕ್ಕೆ ಆಗೋದಿಲ್ಲ. ಅದೇ ರೀತಿಯ ಬಜರಂಗದಳ ಕೂಡಾ ಒಂದು ರಾಜಕೀಯ ಪಕ್ಷದ ಒಂದು ಭಾಗ ಅಷ್ಟೇ ಎಂದು ಹೇಳಿದರು.
ಬಜರಂಗದ ಕಾರ್ಯಕರ್ತರು ಕಾನೂನು ಗಾಳೀಗೆ ತೂರಿ ನೈತಿಕ ಪೊಲೀಸ್ಗಿರಿ ಮಡ್ತಾರೆ. ಇತ್ತ ಬಿಜೆಪಿಯವರು ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ? ಎಂದು ಡಿಕೆಶಿ ಪ್ರಶ್ನೆ ಮಾಡಿದರು.
ಆಂಜನೇಯ ಕರ್ನಾಟಕದಲ್ಲೇ ಹುಟ್ಟಿದ್ದು ಎಂಬುದಕ್ಕೆ ಸಾಕ್ಷಿಗಳಿವೆ. ನಾವು ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿ ಮಾಡುತ್ತೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿಯನ್ನೇ ಸ್ಥಾಪನೆ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಆಶ್ವಾಸನೆ ನೀಡಿದರು. ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕವಾದಂತಹ ಕಾರ್ಯಕ್ರಮಗಳನ್ನು ನಡೆಸುತ್ತೇವೆ ಎಂದೂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.