Districts

ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರದಾನ; ಗೌರವ ಸ್ವೀಕರಿಸಿದ ಅಶ್ವಿನಿ

ಮೈಸೂರು: ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಣೆ ಮಾಡಿದ್ದು, ಇಂದು ಪ್ರದಾನ ಮಾಡಲಾಯಿತು. ಇಂದು ನಡೆದ ಘಟಕೋತ್ಸವ ಸಮಾರಂಭದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದರು.

ಇಂದು ಮೈಸೂರು ವಿವಿಯಲ್ಲಿ 102ನೇ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ಪುನೀತ್‌ ರಾಜ್‌ಕುಮಾರ್‌ ಪತ್ನಿ ಗೌರವ ಡಾಕ್ಟರೇಟ್‌ನ್ನು ಸ್ವೀಕರಿಸಿದರು. ಇದೇ ವೇಳೆ ಇನ್ನೂ ಇಬ್ಬರಿಗೆ ಗೌರವ ಡಾಕ್ಟರೇಟ್‌ ನೀಡಲಾಯಿತು. ಕ್ರಾಫರ್ಡ್ ಹಾಲ್​​ನಲ್ಲಿ ನಡೆದ ಘಟಿಕೋತ್ಸವದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಬಾಲ್ಯದ ಕೆಲವು ನೆನಪುಗಳನ್ನು ಎಲ್ಇಡಿ‌ ಸ್ಕ್ರೀನ್ ನಲ್ಲಿ ಪ್ರದರ್ಶಿಸಲಾಯಿತು. ಡಾಕ್ಟರೇಟ್​ ಸ್ವೀಕರಿಸಲು ಆಗಮಿಸಿದ್ದ ವೇಳೆ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್​ ಅವರು ಭಾವುಕರಾದರು. ಇದೇ ವೇಳೆ ಮಾತನಾಡಿದ ಅಶ್ವಿನಿಯವರು ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್‍ ಕುಮಾರ್ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದ ಎರಡು ಚಿನ್ನದ ಪದಕ ನೀಡುವುದಾಗಿ ಘೋಷಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಮಗಳು ಹಾಗೂ ಅವರ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Share Post