ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಯಲ್ಲಿ ನರಳಾಟ
ಬೀದರ್; ಮನೆ ಮುಂದೆ ಆಟವಾಗುತ್ತಿದ್ದ ಎರಡು ವರ್ಷದ ಮಗುವಿಗೆ ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿರುವ ಘಟನೆ ಬಸವಕಲ್ಯಾಣ ಪಟ್ಟಣದ ಗಾಡಿವಾನ ಓಣಿಯಲ್ಲಿ ನಡೆದಿದೆ. ಆಸ್ಮಾ ಸಮೀರ ಶೇಖ್ (2) ಎಂಬ ಮಗುವೇ ನಾಯಿಗಳ ದಾಳಿಯಿಂದ ಗಾಯಗೊಂಡಿರುವ ಮಗು. ಮುಗುವನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮಗುವಿಗೆ ವೈದ್ಯರು 36ಕ್ಕೂ ಹೆಚ್ಚು ಹೊಲಿಗೆ ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಗರಸಭೆಯ ನಿರ್ಲಕ್ಷ್ಯದಿಂದ ಬಸವ ಕಲ್ಯಾಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.