CrimeDistricts

ಡ್ರಗ್ಸ್‌ ದಂಧೆ ಪ್ರಕರಣ; 42 ವಿದ್ಯಾರ್ಥಿಗಳ ಅಮಾನತು

ಉಡುಪಿ; ಡ್ರಗ್ಸ್‌ ದಂಧೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 42 ವಿದ್ಯಾರ್ಥಿಗಳನ್ನು ಮಣಿಪಾಲ ವಿಶ್ವವಿದ್ಯಾನಿಲಯ ಒಂದು ತಿಂಗಳ ಕಾಲ ಅಮಾನತು ಮಾಡಿ ಆದೇಶ ಹೊರಡಿಸಿದೆ. ವಿಶ್ವವಿದ್ಯಾಲಯ ಹಾಗೂ ಪೊಲೀಸರು ಆಂತರಿಕ ತನಿಖೆ ನಡೆಸಿದ್ದರು. ಇದರಲ್ಲಿ ಆರೋಪ ದೃಢಪಟ್ಟ ಕಾರಣ, ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ವಿವಿ ಹೇಳಿಕೊಂಡಿದೆ. ಈ ಹಿಂದೆ ಮಂಗಳೂರಿನಲ್ಲಿ ವೈದ್ಯರ ಡ್ರಗ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ಎಡಿಜಿಪಿ ಅಲೋಕ್ ಕುಮಾರ್ ಡ್ರಗ್ಸ್ ದಂಧೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದೀಗ ಮಣಿಪಾಲ ವಿವಿ ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದ್ದು, ಒಂದು ತಿಂಗಳ ಕಾಲ ವಿದ್ಯಾರ್ಥಿಗಳನ್ನ ಅಮಾನತುಗೊಳಿಸಿದೆ.

Share Post