Districts

ಚಿಕ್ಕಬಳ್ಳಾಪುರದಲ್ಲಿ ಭೂಕಂಪನ ಹಿನ್ನೆಲೆ; ಸ್ಥಳಕ್ಕೆ ವಿಜ್ಞಾನಿಗಳ ತಂಡ ಭೇಟಿ

ಚಿಕ್ಕಬಳ್ಳಾಪುರ:  ಕಳೆದ ಎರಡು ದಿನಗಳಿಂದ ಚಿಕ್ಕಬಳ್ಳಾಪುರ ಸುತ್ತಮುತ್ತ ಭೂಮಿ ಕಂಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭೂಮಿ ಕಂಪಿಸಿದ ಪ್ರದೇಶದಲ್ಲಿ ಅತಿಹೆಚ್ಚು ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಈ ಕಾರಣದಿಂದಾಗಿಯೇ ಭೂಮಿ ಕಂಪಿಸುತ್ತಿದೆಯಾ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಬುಧವಾರ ಹಾಗೂ ಗುರುವಾರ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಸಚಿವ ಡಾ.ಕೆ.ಸುಧಾಕರ್‌ ಹುಟ್ಟೂರು ಪೇರೇಸೇಂದ್ರ ಸುತ್ತಮುತ್ತ ಎರಡು ಬಾರಿ ಭೂಮಿ ಕಂಪಿಸಿದೆ. ಇದರಿಂದಾಗಿ ಜನರಲ್ಲಿ ಭೀತಿ ಉಂಟಾಗಿದೆ. ಭೂಮಿ ಕಂಪಿಸಿದಾಗ ಜನರು ಭೀತಿಯಿಂದ ಮಗಳಿಂದ ಹೊರಗೆ ಓಡಿಬಂದಿದ್ದಾರೆ.

Share Post