CrimeDistricts

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷನ ನಿವಾಸದ ಮೇಲೆ ಇಡಿ ದಾಳಿ

ಶಿವಮೊಗ್ಗ; ಶಿವಮೊಗ್ಗದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಳಗ್ಗೆಯೇ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ್‌ ಗೌಡ ಅವರ ನಿವಾಸದ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು ಎರಡೂ ಮನೆಗಳಲ್ಲಿ ಶೋಧ ನಡೆಸುತ್ತಿದ್ದಾರೆ.

 

Share Post