CrimeDistricts

ಕೇರಳದಲ್ಲಿ ನಕ್ಸಲರ ಜೊತೆ ಗುಂಡಿನ ಚಕಮಕಿ; ಕರ್ನಾಟಕಕ್ಕೆ ನುಸುಳುವ ಸಾಧ್ಯತೆ

ಮಡಿಕೇರಿ; ಕೇರಳದ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಹಿನ್ನೆಲೆಯಲ್ಲಿ ನಕ್ಸಲರು ಕರ್ನಾಟಕದೊಳಗೆ ನುಸುಳುವ ಎಲ್ಲಾ ಸಾಧ್ಯತೆಗಳೂ ಇವೆ. ಹೀಗಾಗಿ, ವಯನಾಡಿನ ಗಡಿ ಭಾಗವಾದ ಕೊಡಗು ಜಿಲ್ಲೆಯಲ್ಲಿ ಕೆಲವ ಭಾಗಗಳಲ್ಲಿ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕೇರಳದ ಗಡಿ ವಯನಾಡು ಬಳಿ ನಕ್ಸಲರಿದ್ದಾರೆಂಬ ಮಾಹಿತಿ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಿಂದಾಗಿ ನಕ್ಸಲರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ತಪ್ಪಿಸಿಕೊಳ್ಳಲು ಅವರು ಕರ್ನಾಟಕ ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಕೆಲ ಭಾಗಗಳಲ್ಲಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಕೊಡಗಿನ ಕುಟ್ಟ, ಬಿರುನಾಣಿ, ಪರಕಟಗೇರಿ ಹಾಗೂ ತೆರಾಲು ಭಾಗಗಳಲ್ಲಿ ಕೂಂಬಿಂಗ್  ನಡೆಸಲಾಗುತ್ತಿದೆ. ಈ ಭಾಗದಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿ ಓಡಾಡಿದರೂ ವಿಚಾರಣೆ ನಡೆಸಲಾಗುತ್ತಿದೆ. ಗಡಿ ಭಾಗದಲ್ಲಿ ಸಂಚರಿಸುವ ವಾಹನಗಳ ಮೇಲೂ ತೀವ್ರ ನಿಗಾ ಇಡಲಾಗಿದೆ. ಚೆಕ್‌ ಪೋಸ್ಟ್‌ಗಳಲ್ಲಿ ಎಲ್ಲಾ ವಾಹನಗಳನ್ನು ತೀವ್ರ ತಪಾಸಣೆ ನಡೆಸಲಾಗುತ್ತಿದೆ.

 

Share Post