CrimeDistricts

ಹಾಸನದಲ್ಲಿ ಐದನೇ ಮಹಡಿಯಿಂದ ಹಾರಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ; ಹಾಸನದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ಹೊರವಲಯದಲ್ಲಿರುವ ಕಾಲೇಜಿನಲ್ಲಿ ಓದುತ್ತಿದ್ದ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಮಾನ್ಯ  ಪ್ರಥಮ ವರ್ಷದ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಮಾಡುತ್ತಿದ್ದಳು. ಇವತ್ತು ಮೊದಲ ಪರೀಕ್ಷೆ ನಡೆದಿದ್ದು, ಇದರಲ್ಲಿ ಆಕೆ ನಕಲು ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ಉಪನ್ಯಾಸಕರೊಬ್ಬರು ಪ್ರಾಂಶುಪಾಲರಿಗೆ ಕ್ಷಮಾಪಣಾ ಪತ್ರ ಬರೆದುಕೊಡುವಂತೆ ಸೂಚಿಸಿದ್ದರು ಎನ್ನಲಾಗಿದೆ. ಇದರಿಂದಾಗಿ ವಿದ್ಯಾರ್ಥಿನಿ ಮಾನ್ಯ ಕಾಲೇಜಿನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಹಾಸನದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post