CrimeDistricts

ತೆಲಂಗಾಣದಲ್ಲಿ ಭೀಕರ ಅಪಘಾತ; ರಾಜ್ಯದ ಇಬ್ಬರ ದುರ್ಮರಣ

ಬೀದರ್; ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಾಜ್ಯದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ತೆಲಂಗಾಣದ ಜಹೀರಾಬಾದ್‌ನಲ್ಲಿ ಈ ದುರ್ಘಟನೆ ನಡೆದಿದ್ದು, ಬೀದರ್‌ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅವಿನಾಶ್ ಗೋಡೆ (27) ಹಾಗೂ ವೀರೇಶ್ (30) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವರು ಔರಾದ್‌ನ ನಾಗಮಾರಪಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಇವರಿಬ್ಬರೂ ಕಾರಿನಲ್ಲಿ ಬೀದರ್‌ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ರಭಸವಾಗಿ ಗುದ್ದಿದೆ. ಇದರಿಂದಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಜಹೀರಾಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Share Post