CrimeDistricts

ಕಲಬುರಗಿ ಬಳಿ ಭೀಕರ ಅಪಘಾತ; ಐವರು ಸ್ಥಳದಲ್ಲೇ ಸಾವು

ಕಲಬುರಗಿ; ಕಲಬುರಗಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದರಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದ್ರಿಂದ ಈ ದುರ್ಘಟನೆ ನಡೆದಿದೆ.

ಹಳ್ಳೋಳ್ಳಿ ಕ್ರಾಸ್‌ ಬಳಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, ಇದರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಹೊರಬರಬೇಕಿದೆ.

Share Post