CrimeDistricts

ಕಾಲೇಜು ಚುನಾವಣೆ ವಿಚಾರದಲ್ಲಿ ಜಗಳ; 15 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌

ಬೆಳಗಾವಿ; ಇಲ್ಲಿನ ಬಿಮ್ಸ್ ಕಾಲೇಜಿನ ಚುನಾವಣೆ ಹಿನ್ನೆಲೆಯಲ್ಲಿ ಹಾಸ್ಟೆಲ್‌ನಲ್ಲಿ ನಡೆದ ವಿದ್ಯಾರ್ಥಿಗಳ ಗಲಾಟೆ ಮಾರಾಮಾರಿಗೆ ತಿರುಗಿದೆ. ಹಾಸ್ಟೆಲ್‌ ನಲ್ಲಿ ಗಲಾಟೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಪೊಲೀಸರು 15 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಗಲಾಟೆಯಲ್ಲಿ ಎಂಬಿಬಿಎಸ್ ನಾಲ್ಕನೇ ವರ್ಷದ ವಿದ್ಯಾರ್ಥಿಗಳು ರಾಜಸ್ತಾನ ಮೂಲದ ವಿದ್ಯಾರ್ಥಿ ಬುರಾರಾಮ್ ಗೋಧರೆ ಎಂಬವರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  ಬುರಾರಾಮ್ ಅವರ ಮೂಗು, ಕಿರು ಬೆರಳಿಗೆ ಗಾಯವಾಗಿದೆ. ಅವರ ಮೂಗಿನ ಶಸ್ತ್ರ ಚಿಕಿತ್ಸೆಗೆ ರಾಜಸ್ತಾನದ ಏಮ್ಸ್ ಜೋಧಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಿಮ್ಸ್ ಆಡಳಿತಾಧಿಕಾರಿಯಿಂದ ಈ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 15 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

Share Post