ಹಿಂದೂ ಕಾರ್ಯಕರ್ತನಿಗೆ ಬೆದರಿಕೆ; ಪೊಲೀಸ್ ಇನ್ಸ್‌ಪೆಕ್ಟರ್ ಸೇರಿ 7 ಮಂದಿ ವಿರುದ್ಧ ಕೇಸ್
ಮಂಡ್ಯ; ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಈ ಪ್ರಕರಣ ಸಂಬಂಧ ಸರ್ಕಲ್ ಇನ್‌ಸ್ಪೆಕ್ಟರ್ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಶ್ರೀರಂಗಪಟ್ಟಣದಲ್ಲಿ ಕಳೆದ ಭಾನುವಾರ ಜಾಮಿಯಾ ಮಸೀದಿ ಅಲ್ಲ ಮಂದಿರ ಎಂದು ಹಿಂದೂ ಕಾರ್ಯಕರ್ತರು ಯಾತ್ರೆ ನಡೆಸಿದ್ದರು. ಸಂಕೀರ್ತನ ಯಾತ್ರೆ ಮೂಲಕ ಈ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಸಂದರ್ಭದಲ್ಲಿ ಗಂಜಾಂ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತನೊಬ್ಬ ಬಾಳೆದಿಂಡೊಂದನ್ನು ಅನ್ಯಕೋಮಿನ ಮನೆಯ ಮೇಲೆ ಎಸೆದಿದ್ದ. ಪಾಂಡವಪುರದ ಶಶಾಂಕ್ ಎಂಬಾತನೇ ಈ ಕೃತ್ಯ ಎಸಗಿದ್ದ. ಸಿಸಿಟಿವಿ ದೃಶ್ಯ ಆಧರಿಸಿ ಶ್ರೀರಂಗಪಟ್ಟಣ ಪೊಲೀಸರು ಶಶಾಂಕ್‌ನನ್ನು ಬಂಧಿಸಿದ್ದರು. ಈ ವೇಳೆ ಪೊಲೀಸರು ಶಶಾಂಕ್‌ಗೆ ಪ್ರಪಂಚದಲ್ಲಿ 53 ಮುಸ್ಲಿಂ ರಾಷ್ಟ್ರಗಳಿವೆ. ನಿನ್ನ ರುಂಡ-ಮುಂಡ ಕತ್ತರಿಸುತ್ತಾರೆ ಎಂದು ಬೆದರಿಸಿದ್ದಾರೆ ಅಂತ ಆರೋಪಿಸಲಾಗಿದೆ.
ಈ ಆರೋಪದ ಹಿನ್ನೆಲೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.