ಮೈಸೂರಿನಲ್ಲಿ ಭಾರಿ ಬೆಂಕಿ ದುರಂತ; ಥರ್ಮಾಕೋಲ್ ಫ್ಯಾಕ್ಟರಿ ಭಸ್ಮ
ಮೈಸೂರು: ಮೈಸೂರಿನಲ್ಲಿ ಸಂಜೆ ದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಅಶೋಕಪುರಂ ರೈಲು ನಿಲ್ದಾಣದ ಬಳಿ ಇರುವ ಥರ್ಮಾಕೋಲ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಾರ್ಖಾನೆ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಅವಘಡ ಸಂಭವಿಸಿದಾಗ ಕಾರ್ಮಿಕರು ಇನ್ನೂ ಅಲ್ಲೇ ಕೆಲಸ ಮಾಡುತ್ತಿದ್ದರು. ಆದ್ರೆ ಬೆಂಕಿ ಹೊತ್ತುಕೊಂಡಿದ್ದು ಕಾಣಿಸುತ್ತಿದ್ದಂತೆ ಅವರೆಲ್ಲಾ ಹೊರಗೆ ಓಡಿ ಬಂದಿದ್ದಾರೆ. ಮೂವರು ಕಾರ್ಮಿಕರಂತೂ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.