Districts

ಸುಟ್ಟು ಭಸ್ಮವಾದ ದಿನಸಿ ಅಂಗಡಿ; 25 ಲಕ್ಷ ರೂಪಾಯಿ ನಷ್ಟ..!

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ಪಟ್ಟಣದಲ್ಲಿ ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಬಸ್‌ ನಿಲ್ದಾಣದ ರಸ್ತೆಯಲ್ಲಿರುವ ದಿನಸಿ ಅಂಗಡಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಬಹುತೇಕ ಅಂಗಡಿ ಸುಟ್ಟು ಭಸ್ಮವಾಗಿದೆ.

 

ಈ ದಿನಸಿ ಅಂಗಡಿ ಮಹಮದ್‌ ಅಮ್ಜಾದ್‌ ಹುಸೇನ್‌ ಎಂಬುವವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ಈ ಅನಾಹುತ ಸಂಭವಿಸಿದ್ದು, ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ನಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.

Share Post