Districts

5 ಎಕರೆ ಪ್ರದೇಶದ ಕಬ್ಬು ಸುಟ್ಟು ಭಸ್ಮ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿವಾಪೂರ ಗ್ರಾಮದಲ್ಲಿ ತಡರಾತ್ರಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಭಸ್ಮವಾಗಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆ.

ಗ್ರಾಮಸ್ಥರು ಮತ್ತು ಸ್ಥಳೀಯರ ಸಮಯಪ್ರಜ್ಞೆಯಿಂದ ನೂರಾರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಉಳಿದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಬೆಂಕಿ ಹೊತ್ತಿಕೊಳ್ಳಲು ಕಾರಣ ಎಂದು ರೈತರು ಆರೋಪಿಸಿದ್ದಾರೆ.

Share Post