ಕಲುಷಿತ ನೀರು ಸೇವನೆ ಪ್ರಕರಣ; ಮತ್ತಷ್ಟು ಜನ ಆಸ್ಪತ್ರೆಗೆ ದಾಖಲು
ಬೆಳಗಾವಿ; ರಾಮದುರ್ಗ ತಾಲ್ಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 94ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತೂ ಕೂಡಾ 15 ಮಂದಿ ತೀವ್ರ ಅಸ್ವಸ್ಥರಾಗಿದ್ದು, ರಾಮದುರ್ಗ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕುಡಿಯುವ ನೀರು ಪೂರೈಕೆ ಪೈಪ್ ಒಡೆದಿದ್ದು, ಅದರಲ್ಲಿ ಚರಂಡಿ ನೀರು ಸೇರಿದೆ. ಊರಿನ ಜನರು ತಿಳಿಯದೇ ಈ ನೀರನ್ನು ಸೇವಿಸಿದ್ದಾರೆ. ಇದರಿಂದಾಗಿ ಗ್ರಾಮಸ್ಥರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಹಲವರಲ್ಲಿ ನಿರ್ಜಲೀಕರಣ ಸಮಸ್ಯೆ ಉಂಟಾಗಿದೆ. ಚಿಕ್ಕ ಮಕ್ಕಳು, ಮುದುಕರು ಕೂಡಾ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ.