Districts

ಅಭಿಮಾನಿಯ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ

ತುಮಕೂರು; ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿಮಾನಿ ದಂಪತಿಯ ಮನವಿ ಮೇರೆಗೆ ಅವರ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ್ದಾರೆ.ತುಮಕೂರಿನ ಬಾಲಭವನದಲ್ಲಿ ನಡೆದ ಗ್ರಂಥಾವಲೋಕನ ಸಂಕೀರ್ಣ ಸಂವಾದ ಕಾರ್ಯಕ್ರಮದ ವೇಳೆ ಬಂದಿದ್ದ ದಂಪತಿ, ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಸ್ಪಂದಿಸಿ, ವೇದಿಕೆಯಲ್ಲೇ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದರು.

   ಮಧುಗಿರಿ ತಾಲೂಕಿನ ಐ.ಡಿ. ಹಳ್ಳಿ ಹೋಬಳಿಯ ತಿಪ್ಪಾಪುರ ಗ್ರಾಮದ ಗಂಗಾಧರಯ್ಯ ಎಂಬುವರು ಸಿದ್ದರಾಮಯ್ಯ ಅವರ ಅಭಿಮಾನಿಯಂತೆ. ಸಿದ್ದರಾಮಯ್ಯ ಅವರು ತುಮಕೂರಿಗೆ ಬರುತ್ತಾರೆ ಎಂದು ಕುಟುಂಬ ಸಮೇತ ಆಗಮಿಸಿದ್ದ ಅಭಿಮಾನಿ, ತನ್ನ ಮಗನಿಗೆ ಸಿದ್ದರಾಮಯ್ಯ ಎಂದು ಹೆಸರು ಇಡುವಂತೆ ವೇದಿಕೆಯಲ್ಲಿ ಮನವಿ ಮಾಡಿದ್ದಾರೆ. ತಮ್ಮ ಅಭಿಮಾನಿ ಮನವಿಗೆ ಸ್ಪಂದಿಸಿದ ಸಿದ್ದರಾಮಯ್ಯ, ನಾಮಕರಣ ಮಾಡಿ 500 ರೂ. ಉಡುಗೊರೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆ. ಎನ್. ರಾಜಣ್ಣ, ವೈ.ಎಸ್‌.ವಿ. ದತ್ತ ಸೇರಿದಂತೆ ಇತರರು ಭಾಗಿಯಾಗಿದ್ದರು.

Share Post