ಸುಮಲತಾ ಪರ ಬ್ಯಾಟ್ ಬೀಸಿದ ಮಾಜಿ ಸಚಿವ ನಾರಾಯಣಗೌಡ
ಮಂಡ್ಯ; ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅವರು ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಅವರಿಗೇ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂದು ಮಾಜಿ ಸಚಿವ ನಾರಾಯಣಗೌಡ ಹೇಳಿದ್ದಾರೆ. ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಹೇಳಿದ್ದಾರೆ.
ಸುಮಲತಾ ಅವರು ಪಕ್ಷಕ್ಕೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಅವರಿಗೇ ಟಿಕೆಟ್ ನೀಡಬೇಕು. ಜಿಲ್ಲೆಯಲ್ಲಿ ಜೆಡಿಎಸ್ ಪ್ರಭಾವ ಇಲ್ಲ. ಇದ್ದಿದ್ದರೆ ಕಳೆದ ಬಾರಿಯೇ ಗೆಲ್ಲುತ್ತಿದ್ದರು. ಆಗ ಜಿಲ್ಲೆಯಲ್ಲಿ ಜೆಡಿಎಸ್‌ನ ಎಂಟು ಶಾಸಕರಿದ್ದರು. ಆದರೂ ಸೋತರು. ಹೀಗಾಗಿ ಮಂಡ್ಯ ಕ್ಷೇತ್ರವನ್ನು ಬಿಜೆಪಿಗೇ ಉಳಿಸಿಕೊಂಡು ಸುಮಲತಾ ಅವರಿಗೇ ಟಿಕೆಟ್ ನೀಡಬೇಕೆಂದು ಆಗ್ರಹಿಸಿದ್ದಾರೆ.