Districts

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಕಾಂಗ್ರೆಸ್‌ಗೆ ಗುಡ್‌ಬೈ

ಉಡುಪಿ; ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ  ಗುಡ್‌ಬೈ ಹೇಳಿದ್ದಾರೆ. ಚುನಾವಣೆ ಹತ್ತಿರಕ್ಕೆ ಬರುತ್ತಿರುವ ಉಡುಪಿಯ ಪ್ರಭಾವಿ ನಾಯಕ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್‌ಗೆ ಹೊಡೆತ ಬಿದ್ದಂತಾಗಿದೆ.

 

ಪ್ರಮೋದ್‌ ಮಧ್ವರಾಜ್‌ ಅವರು ಇಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಇದೀಗ ಅವರು ಬಿಜೆಪಿ ಸೇರುತ್ತಾರೆಂದು ತಿಳಿದುಬಂದಿದೆ. ಈಗಾಗಲೇ ರಾಜ್ಯದ ಬಿಜೆಪಿ ನಾಯಕರ ಜೊತೆ ಅವರು ಮಾತನಾಡಿದ್ದಾರೆ. ಶೀಘ್ರದಲ್ಲೇ ಅವರು ವರಿಷ್ಠ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

 

Share Post