DistrictsPolitics

ಮಾಜಿ ಶಾಸಕ ರಾಮಣ್ಣ ಲಮಾಣಿ ಅ.10ಕ್ಕೆ ಕಾಂಗ್ರೆಸ್‌ ಸೇರೋದು ಫಿಕ್ಸ್‌!

ಗದಗ; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ. ಶಿರಹಟ್ಟಿಯಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿದ್ದ ಮಾಜಿ ಶಾಸಕ ರಾಮಣ್ಣ ಲಮಾಣಿ ಬಿಜೆಪಿಗೆ ಗುಡ್​ಬೈ ಹೇಳಲಿದ್ದಾರೆ. ಇದೇ ಅ.10ರಂದು ಅವರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಇಂದು ಈ ವಿಚಾರವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕುಂದ್ರಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತಿದ್ದೇನೆ. ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ ಮತ್ತು ನಾನು ಅಕ್ಟೋಬರ್‌ 10ರಂದು ಕಾಂಗ್ರೆಸ್‌ ಸೇರಲಿದ್ದೇವೆ ಎಂದು ಹೇಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರನ್ನು ಭೇಟಿಯಾಗಿ ಬಂದಿದೇನೆ. ಅಕ್ಟೋಬರ್ 10ಕ್ಕೆ ಬಹಳಷ್ಟು ಮಾಜಿ ಶಾಸಕರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ. ಅದೇ ನೀವೂ ಸೇರ್ಪಡೆಯಾಗಿ ಎಂದಿದ್ದಾರೆ ಎಂದು ಲಮಾಣಿ ಹೇಳಿದ್ದಾರೆ.

 

Share Post