Districts

ಮೀನು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ: ೨೦ ಮಂದಿ ಅಸ್ವಸ್ಥ

ಮಂಗಳೂರು: ಮೀನು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಪ್ಪತ್ತು ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಬೈಕಂಪಾಡಿ ಹೊರವಲಯದ ಕೈಗಾರಿಕಾ ಘಟಕದಲ್ಲಿ ನಡೆದಿದೆ.

ಇಲ್ಲಿನ ಎವರೆಸ್ಟ್‌ ಮೀನು ಸಂಸ್ಕರಣಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಮೀನು ಸಂಸ್ಕರಣಾ ಘಟಕದಲ್ಲಿ ಸುಮಾರು 80ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಅದರಲ್ಲಿ ಇಪ್ಪತ್ತು ಮಂದಿ ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಸುರತ್ಕಲ್‌ನಲ್ಲಿರುವ ಶ್ರೀನಿವಾಸ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅನಿಲ ಸೋರಿಕೆಗೆ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post