Districts

ಸರ್ಕಾರಿ ಕಾರ್ಯಕ್ರಮವಾಗಿ ದಾಸೋಹ ದಿನಾಚರಣೆ: ಬೊಮ್ಮಾಯಿ

ತುಮಕೂರು:  ಶ್ರೀ ಸಿದ್ದಗಂಗಾ ಮಠದಲ್ಲಿ ದಾಸೋಹ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸರ್ಕಾರದ ಕಾರ್ಯಕ್ರಮವನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ತಿಳಿಸಿದ್ರು.  ರಾಜ್ಯದಾದ್ಯಂತ ಸಾಧ್ಯವಾಗುವ ಕಡೆ ದಾಸೋಹ ಪರಂಪರೆ ಮಾಡಲು ಸರ್ಕಾರ ಬದ್ಧವಾಗಿದೆ. ದಾಸೋಹ ಪರಂಪರೆಗೆ ನಾಂದಿ ಹಾಡಿದ ಶ್ರೀಗಳ ಹೆಜ್ಜೆ ಗುರುತಿನಲ್ಲಿ ನಡೆಯುವ ಸಂಕಲ್ಪದಿಂದ ಇಂದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಎಲ್ಲರಿಗೂ ಅನ್ನ, ಅಕ್ಷರ, ಸೂರು ಒಡಗಿಸುವ ಧ್ಯೇಯ ಸರ್ಕಾರ ಹೊಂದಿದೆ ಎಂದು ತಿಳಿಸಿದರು.

ಸರ್ಕಾರ ನೀಡುತ್ತಿರುವ ಅಕ್ಕಿ, ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲಾ-ಕಾಲೇಜು ಮೂಲಕ ಶಿಕ್ಷಣ, ನಿರ್ಗತಿಕರಿಗೆ ಸೂರು ಒದಗಿಸುವ ಸರ್ಕಾರಿ ಕಾರ್ಯಗಳನ್ನು ದಾಸೋಹದ ಪರಂಪರೆಗೆ ಸೇರಿಸಿದರು. ಅನ್ನ ದಾಸೋಹಕ್ಕಾಗಿ ಸರ್ಕಾರ 4 ಕೆಜಿ ನೀಡಲಾಗುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಹೆಚ್ಚಿಸಿದೆ. ಜಿಲ್ಲೆಗಳ ಆಹಾರ ಪದ್ಧತಿಗನುಗುಣವಾಗಿ ರಾಗಿ ಜೋಳ ಇತ್ಯಾದಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.

ದಾಸೋಹ ನಡೆಸುವ ಮಠಮಾನ್ಯ ಸಂಸ್ಥೆಗಳಿಗೆ ಪಡಿತರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಮಕ್ಕಳಿಗೆ ಅಕ್ಷರ ದಾಸೋಹ ನೀಡಲು ರೈತ ವಿದ್ಯಾನಿಧಿ,  ನಿನ್ನೆ ಕಾರ್ಮಿಕರ ಮಕ್ಕಳಿಗೆ ವಿದ್ಯೆ ಒದಗಿಸುವ150 ಕೋಟಿ ರೂ. ಹೆಚ್ಚು ವಿದ್ಯಾರ್ಥಿ ವೇತನವನ್ನು ನೇರವಾಗಿ ಪಾವತಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ.

ಆಶ್ರಯ ದಾಸೋಹ ಕೈಂಕರ್ಯವನ್ನು ಸರ್ಕಾರ ಕೈಗೆತ್ತಿಕೊಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಸತಿ ಯೋಜನೆಯಡಿ 5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

Share Post