Districts

ರಾಜ್ಯಪಾಲ ಥಾವರ್‌ ಚಂದ್‌ ಬೆಳಗಾವಿ ಪ್ರವಾಸ

ಬೆಳಗಾವಿ; ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳಕಾಲ ಪ್ರವಾಸ ಕೈಗೊಂಡಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಸ್ವಾಗತಿಸಲಾಯಿತು. ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ್ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು .

ಈ ಸಂದರ್ಭದಲ್ಲಿ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಮ್ ನಸಲಾಪುರಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಕರಿಸಿದ್ದಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Share Post