ಧರ್ಮಸ್ಥಳ: ಮರಳು ಲಾರಿಗಳವರಿಂದ ಕಮೀಷನ್ ಪಡೆಯುತ್ತಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ನಡುವೆ ಫೈಟ್ ನಡೆದಿತ್ತು. ಈ ಸಂಬಂಧ ಇಬ್ಬರೂ ಚಾಲೆಂಜ್ ಮಾಡಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಇಂದು ದಿನಾಂಕ ನಿಗದಿ ಮಾಡಿದ್ದರು. ಇಂದು ಇಬ್ಬರೂ ಧರ್ಮಸ್ಥಳಕ್ಕೆ ಆಗಮಿಸಿ ಆಣೆ ಪ್ರಮಾಣ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ನಾನು ಯಾರಿಂದಲೂ ಹಣ ಪಡೆದಿಲ್ಲ. ಅದನ್ನು ದೇವರ ಮುಂದೆಯಹೂ ಆಣೆ ಪ್ರಮಾಣ ಮಾಡಿದ್ದೇನೆ. ಆದರೆ, ಅವರಿಗೆ ಪ್ರಾಮಾಣಿಕವಾಗಿ ಒಪ್ಪಿಕೊಳ್ಳುವ ತಾಕತ್ತಿಲ್ಲ. ನಾನು ಹಣ ಪಡೆದ ಕುರಿತು ಯಾವುದೇ ದಾಖಲೆಗಳಿದ್ದರೆ ಬೇಳೂರು ಗೋಪಾಲ ಕೃಷ್ಣ ಅವರು ನನ್ನ ವಿರುದ್ಧ ಕೇಸ್ ಹಾಕಲಿ ಎಂದು ಸವಾಲು ಹಾಕಿದರು.
ನಂತರ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಶಾಸಕ ಹರತಾಳು ಹಾಲಪ್ಪ ಅವರ ವಿರುದ್ಧ ಮರಳು ದಂಧೆಯಿಂದ ಕಮಿಷನ್ ತೆಗೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಹೇಳಿದ್ದೆ. ಅದಲ್ಲದೇ ದುಡ್ಡು ಕೊಟ್ಟವರೂ ಕೂಡ ನನ್ನೊಟ್ಟಿಗೆ ಇದ್ದಾರೆ. ಇದು ನೂರಕ್ಕೆ ನೂರು ಸತ್ಯ. ಅವರು ಸುಮಾರು 300 ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಅದರಲ್ಲಿ 30 ಜನ ಅವರ ಪರವಾಗಿ ಸಾಕ್ಷಿ ನೀಡಬಹುದು ಎಂದರು.
Post Views: 586