Districts

HARSHA MURDER CASE: ಮರಣೋತ್ತರ ಪರೀಕ್ಷೆ ಅಂತ್ಯ; ಮೆರವಣಿಗೆ ಮೂಲಕ ಪಾರ್ಥಿವ ಶರೀರ ರವಾನೆ

ಶಿವಮೊಗ್ಗ; ರಾತ್ರಿ ಕೊಲೆಯಾಗಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಅವರ ಮರೋಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತದೇಹವನ್ನು ಕುಟುಂಸ್ಥರಿಗೆ ಹಸ್ತಾಂತರಿಸಲಾಗಿದೆ. ಹರ್ಷನ ಪಾರ್ಥಿವ ಶರೀರವನ್ನು ಮೆಗ್ಗಾನ್‌ ಆಸ್ಪತ್ರೆಯಿಂದ ಬಸವನ ಬೀದಿಯಲ್ಲಿರುವ ಹರ್ಷ ಮನೆಗೆ ಕೊಂಡೊಯ್ಯಲಾಗುತ್ತಿದೆ.

ಮೆರವಣಿಗೆಯಲ್ಲಿ ಸಾವಿರಾರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಕೇಸರಿ ಬಾವುಗಳನ್ನಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಬಸವನ ಬೀದಿಯಲ್ಲಿರುವ ಮನೆ ಬಳಿ ಹರ್ಷ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಅನಂತರ ಸಂಜೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ವಿದ್ಯಾನಗರದ ರೋಟರಿ ಚಿತಾಗಾರದಲ್ಲಿ ಮರಾಠ ಭಾವಸಾರ ವಿಧಿವಿಧಾನದಂತೆ ಹರ್ಷ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಸಿದ್ದಯ್ಯ ರಸ್ತೆ, ಗಾಂಧಿ ಬಜಾರ್‌ ಮಾರ್ಗವಾಗಿ ಹರ್ಷ ಅವರ ಪಾರ್ಥೀವ ಶರೀರದ ಮೆರವಣಿಗೆ ನಡೆಯಲಿದೆ.

ಮೆರವಣಿಗೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Share Post