Districts

ಶಿವಮೊಗ್ಗ ಹರ್ಷ ಕೊಲೆ ಪ್ರಕರಣ; ತನಿಖೆಯ ಹೊಣೆ ಎನ್‌ಐಎಗೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ತಿಂಗಳ ಹಿಂದೆ ಕೊಲೆಯಾದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣವನ್ನು ಕೇಂದ್ರ ಸರ್ಕಾರ ಎನ್‌ಐಗೆ ವಹಿಸಿದ್ದು, ಎನ್‌ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಆಗಮಿಸುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ಒಟ್ಟು ಹತ್ತು ಆರೋಪಿಗಳಿದ್ದಾರೆ. ಅವರನ್ನು ಎನ್‌ಐಎ ಅಧಿಕಾರಿಗಳು ವಿಚಾರ ನಡೆಸುವ ಸಾಧ್ಯತೆ ಇದೆ.

  ಪ್ರಕರಣದವನ್ನು ಎನ್‌ಐಎಗೆ ವಹಿಸಬೇಕೆಂದು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಸಂಸದರು ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡಿದ್ದರು. ಇದರ ಜೊತೆಗೆ ಪ್ರಕರಣದಲ್ಲಿ ಯುಎಪಿಎ ಆ್ಯಕ್ಟ್ ಅಳವಡಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ಎನ್‌ಐಎಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ಪ್ರಕರಣ ಎನ್‌ಐಎ ಅಧಿಕಾರಿಗಳು, ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವುದರಿಂದ ಎಲ್ಲಾ ಹತ್ತೂ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಎನ್‌ಐಎ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ ನಂತರ, ಎನ್‌ಐಎ ವಿಶೇಷ ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

 

Share Post