Districts

HARSHA MURDER CASE: ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ; ಪೊಲೀಸ್‌ ಲಾಠಿ ಪ್ರಹಾರ

ಶಿವಮೊಗ್ಗ: ಶಿವಮೊಗ್ಗದ ನಗರದಲ್ಲಿ ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ. ಎನ್‌.ಟಿ.ರಸ್ತೆಯಲ್ಲಿ ಕೆಲವರು ಗುಂಪು ಸಿಕ್ಕ ಸಿಕ್ಕಲ್ಲಿ ಕಲ್ಲು ಬೀಸಿ ಆಕ್ರೋಶ ವ್ಯಕ್ತಪಡಿಸಿದೆ. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಕಳೆದ ರಾತ್ರಿ ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿಯೇ ಕೆಲ ಗುಂಪುಗಳು ಕಲ್ಲು ತೂರಾಟ ನಡೆಸಿದ್ದವು. ಅನಂತರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು. ಆದ್ರೆ, ಹರ್ಷಾರ ಮರಣೋತ್ತರ ಪರೀಕ್ಷೆ ನಂತರ, ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತಿದೆ. ಮೆರವಣಿಗೆ ಮೂಲಕ ಅವರ ಮನೆಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ.

 

Share Post