DistrictsLifestyle

ಹಾಸನಾಂಬೆ ದೇಗುಲ ಓಪನ್‌; ನಾಳೆಯಿಂದ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ

ಹಾಸನ; ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇಗುಲದ ಬಾಗಿಲನ್ನು ಇಂದು ತೆರೆಯಲಾಗಿದೆ. ನಾಳೆಯಿಂದ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸುಮಾರು ಹದಿನೈದು ದಿನಗಳ ಕಾಲ ದೇಗುಲದ ಬಾಗಿಲು ತೆಗೆದಿದ್ದು, ಇದರಲ್ಲಿ 13 ದಿನಗಳು ದಿನದ 24 ಗಂಟೆಯೂ ಸಾರ್ವಜನಿಕರು ದೇವಿಯ ದರ್ಶನ ಪಡೆಯಬಹುದು. 

ಇಂದು ಮಧ್ಯಾಹ್ನ 12.24ಕ್ಕೆ ಅರಸು ವಂಶಸ್ಥ ನಂಜರಾಜೇ ಅರಸ್ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಾಯಿತು. ನವೆಂಬರ್‌ 15ರವೆರಗೆ ಈ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಹೆಲಿಟೂರಿಸಂ, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್‍ನಲ್ಲಿ ಹಾರಾಟ ವ್ಯವಸ್ಥೆ ಮಾಡಲಾಗಿದೆ.

 

Share Post