Districts

ಚಂದ್ರು ಕೊಲೆ ಪ್ರಕರಣ; ಗೃಹ ಸಚಿವರಿಗೆ ಜವಾಬ್ದಾರಿಯ ಅರಿವಿಲ್ಲ – ಹೆಚ್‌.ಡಿ.ಕುಮಾರಸ್ವಾಮಿ

ಮೈಸೂರು: ಬೆಂಗಳೂರಿನ ಗೋರಿಪಾಳ್ಯದಲ್ಲಿ ನಡೆದ ಚಂದ್ರು ಎಂಬ ಯುವಕನ ಕೊಲೆ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನೆಯ ಬಗ್ಗೆ ವರ್ಣನಾತ್ಮಕವಾಗಿ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆ ಸಣ್ಣತನದಿಂದ ಕೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಗೃಹಸಚಿವರಾದವರಿಗೆ ಅವರ ಹುದ್ದೆಯ ಜವಾಬ್ದಾರಿಯ ಅರಿವಿರಬೇಕು. ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ಅವರ ಜವಾಬ್ದಾರಿಯ ಅರಿವಿಲ್ಲದೆ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.

 

Share Post