CrimeDistricts

ಬೈಕ್‌ಗಳ ಮುಖಾಮುಖಿ ಡಿಕ್ಕಿ; ಬ್ಯಾಂಕ್‌ ಮಹಿಳಾ ಉದ್ಯೋಗಿ ದುರ್ಮರಣ

ಕೊಡಗು; ಕೊಡಗು ಜಿಲ್ಲೆ ವಿರಾಜಪೇಟೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಬ್ಯಾಂಕೊಂದರ ಮಹಿಳಾ ಉದ್ಯೋಗಿ ಸಾವನ್ನಪ್ಪಿದ್ದಾರೆ. ಅಮ್ಮತ್ತಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಕೇರಳದ ತ್ರಿಶೂರ್‌ ಮೂಲದ ಅಮೃತ ಅವರು ಅಮ್ಮತ್ತಿಯ ಕೆನರಾ ಬ್ಯಾಂಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ತಡರಾತ್ರಿ ಅವರು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ವೇಳೆ ಅಮೃತ ತೀವ್ರವಾಗಿ ಗಾಯಗೊಂಡಿದ್ದರು. ಅವರಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಿ ನಂತರ ಮೈಸೂರಿನ ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿಪ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Share Post