DistrictsHealth

ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗಲೇ ಹೃದಯಾಘಾತ; ವಿದ್ಯಾರ್ಥಿನಿ ಸಾವು

ಚಾಮರಾಜನಗರ; ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ನಿರ್ಮಲಾ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ.

ಇಂದು ಬೆಳಗ್ಗೆ ಶಾಲೆಯಲ್ಲಿ ಎಲಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುತ್ತಿದ್ದರು, ಈ ವೇಳೆ ಹತ್ತನೇ ತರಗತಿ ವಿದ್ಯಾರ್ಥಿನಿ ಪೆಲಿಸಾ ಕುಸಿದುಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಪೆಲಿಸಾ ಸಾವನ್ನಪ್ಪಿದ್ದರು. ಪರೀಕ್ಷೆ ಮಾಡಿದ ವೈದ್ಯರು ಪೆಲಿಸಾ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಿದ್ದಾರೆ. ಹೃದಯಾಘಾತದಿಂದ ಈ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.

Share Post