ಕೆಆರ್‌ಎಸ್ ಡ್ಯಾಂ ಒಳಹರಿವು ಹೆಚ್ಚಳ; ಮೂರೇ ದಿನದಲ್ಲಿ ಭರ್ತಿ
ಮಂಡ್ಯ; ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂಗೆ ಒಳ ಹರಿವು ಹೆಚ್ಚಾಗಿದೆ. ಕೆಆರ್‌ಎಸ್ ಡ್ಯಾಂ ತುಂಬಲು ಇನ್ನು ಐದು ಅಡಿ ಅಷ್ಟೇ ಬಾಕಿ ಉಳಿದಿದೆ. ಇದೇ ಪ್ರಮಾಣದ ಒಳಹರಿವು ಬಂದರೆ ಇನ್ನು ಮೂರೇ ದಿನದಲ್ಲಿ ಕೆಆರ್‌ಎಸ್ ಡ್ಯಾಂ ಸಂಪೂರ್ಣ ಭರ್ತಿಯಾಗಲಿದೆ ಎಂದು ತಿಳಿದುಬಂದಿದೆ.
ಕೆಆರ್‌ಎಸ್ ಡ್ಯಾಂನ ಗರಿಷ್ಠ ಮಟ್ಟ 124.80 ಅಡಿ ಇದೆ. ಇದರಲ್ಲಿ ಈಗಾಗಲೇ 119.44 ಅಡಿ ನೀರು ಸಂಗ್ರಹಗೊಂಡಿದೆ. ಒಳಹರಿವಿನ ಪ್ರಮಾಣ 38,858 ಕ್ಯೂಸೆಕ್‌ಗೆ ಏರಿಕೆಯಾಗಿದೆ. 3,453 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯಲ್ಲಿ 42.341 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಯಿದೆ. ನದಿ ಪಾತ್ರದ ಜನರು ತಮ್ಮ ಆಸ್ತಿ ಪಾಸ್ತಿ ರಕ್ಷಣೆ ಮಾಡಿಕೊಳ್ಳುವಂತೆ ಕಾವೇರಿ ನೀರಾವರಿ ನಿಗಮ ಸೂಚನೆ ನೀಡಿದೆ.