Districts

ರಾಮನಗರ ಜಿಲ್ಲೆಯಲ್ಲಿ ಭಾರಿ ಮಳೆ; ಹಾನಿ ಪ್ರದೇಶಗಳಲ್ಲಿ ಸಿಎಂ ಪರಿಶೀಲನೆ

ರಾಮನಗರ; ಭಾರೀ ಮಳೆ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಮನಗರಕ್ಕೆ ಭೇಟಿ ನೀಡಿದ್ದಾರೆ. ಮಳೆಯಿಂದ ಆದ ಹಾನಿಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಸಂತ್ರಸ್ತರ ನೋವು ಆಲಿಸಿರುವ ಸಿಎಂ, ಸೂಕ್ತ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದ್ದಾರೆ.

ರಾಮನಗರದ ಭಕ್ಷಿ ಕೆರೆ ಏರಿ ಒಡೆದು ನಗರಕ್ಕೆ ನೀರು ನುಗ್ಗಿದೆ. ಇದರಿಂದಾಗಿ 150ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಗೌಸಿಯಾನಗರದಲ್ಲಿ ಮನೆಗಳಿಗೆ ಹಾನಿಯಾಗಿದೆ. ಹಾನಿ ಪ್ರದೇಶದಲ್ಲಿ ಸಿಎಂ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿಯವರು ಸಿಎಂಗೆ ಮಳೆ ಹಾನಿ ಹಾಗೂ ಅಲ್ಲಿನ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎನ್‌.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್‌.ಅಶೋಕ್‌, ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ ಹಾಜರಿದ್ದಾರೆ.

Share Post