Districts

ಮನೆ ಮೇಲೆ ಗುಡ್ಡ ಕುಸಿತ ಪ್ರಕರಣ; ನಾಲ್ವರ ದುರ್ಮರಣ

ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಭಟ್ಕಳದಲ್ಲಿ ಮನೆಯೊಂದರ ಮೇಲೆ ಕಳೆದ ರಾತ್ರಿ ಗುಡ್ಡವೊಂದು ಕುಸಿದುಬಿದ್ದಿತ್ತು. ಬೆಳಗ್ಗೆಯಿಂದ ಕಾರ್ಯಾಚರಣೆ ನಡೆದಿತ್ತು. ಆದ್ರೆ ಮನೆಯಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದ್ದು, ಮೂವರ ಶವ ಹೊರ ತೆಗೆಯಲಾಗಿದೆ.

ಗುಡ್ಡ ಕುಸಿತದಿಂದಾಗಿ ಮೃತಪಟ್ಟ ಲಕ್ಷ್ಮೀ ನಾರಾಯಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮೀ ನಾಯ್ಕ (33) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಅವರ ಮೃತ ದೇಹವನ್ನು ಹೊರಗೆ ತೆಗೆಯಲಾಗಿದೆ. ಪುತ್ರ ಅನಂತ ನಾಯ್ಕ (32) ಶವಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

Share Post