BengaluruDistricts

ಡಿ.5ರವರೆಗೂ ರಾಜ್ಯದಲ್ಲಿ ಭಾರಿ ಮಳೆ; ಯಾವ ಜಿಲ್ಲೆಯಲ್ಲಿ ಅಬ್ಬರಿಸಲಿದ್ದಾನೆ ವರುಣ..?

ಬೆಂಗಳೂರು; ಮಳೆಗಾಲ ಮುಗಿದು ಚಳಿಗಾಲ ಶುರುವಾಗುತ್ತಿದೆ. ಆದ್ರೆ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳುತ್ತಿದೆ. ಡಿಸೆಂಬರ್‌ 5 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದಾನೆ.  ಡಿಸೆಂಬರ್ 01 ರಂದು ರಾಜ್ಯದಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಇವತ್ತು ಕೂಡಾ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ವಿಜಯನಗರಗಳಲ್ಲಿ ಮಳೆ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಈಗಾಗಲೇ ಮಳೆಯಾಗಲಿದೆ ಎಂದ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share Post