Districts

ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಿರಬಹುದು; ಸಚಿವ ಮುರುಗೇಶ್‌ ನಿರಾಣಿ

ಬೆಳಗಾವಿ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್‌ ಈಶ್ವರಪ್ಪ ಅವರಿಗೆ ಸೂಚನೆ ಕೊಟ್ಟಿರಬಹುದು. ಆದ್ರೆ ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ ಎಂದು ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್‌ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾತನಾಡಿದರು. 

ಸರ್ಕಾರದ ಪರವಾಗಿ ನಾನು ಇಲ್ಲಿಗೆ ಭೇಟಿ ನೀಡಿಲ್ಲ. ಮಾನವೀಯತೆಯ ದೃಷ್ಟಿಯಿಂದ ನಾನು ಇಲ್ಲಿಗೆ ಬಂದಿದ್ದೇವೆ. ಮೃತ ಸಂತೋಷ್‌ ಪಾಟೀಲ್‌  ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಪೋಲಿಸ್ ಇಲಾಖೆ ಪ್ರಕರಣದ ತನಿಖೆ ನಡೆಸುತ್ತಿದೆ. ರಾಜೀನಾಮೆ ನೀಡುವಂತೆ ಈಶ್ವರಪ್ಪ ಅವರಿಗೆ ಹೈಕಮಾಂಡ್ ಸೂಚಿಸಿರಬಹುದು, ಆದ್ರೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ನಿರಾಣಿ ಹೇಳಿದರು. ಕುಟುಂಬದವರು ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿಗಾಗಿ ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಮಾತನಾಡುತ್ತೇನೆ ಎಂದು ನಿರಾಣಿ ಹೇಳಿದರು.

Share Post