Districts

ಹೈಕೋರ್ಟ್‌ನಿಂದ ಹಿಜಾಬ್‌ ತೀರ್ಪು; ಭಟ್ಕಳದಲ್ಲಿ ಮುಸ್ಲಿಂ ವರ್ತಕರಿಂದ ವ್ಯಾಪಾರ ವಹಿವಾಟು ಸ್ಥಗಿತ

ಭಟ್ಕಳ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಬಾರದು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದ್ರಿಂದ ಅಸಮಾಧಾನಗೊಂಡಿರುವ ಭಟ್ಕಳದ ಮುಸ್ಲಿಂ ವರ್ತಕರು, ಸ್ವಯಂಪ್ರೇರಿತರಾಗಿ ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದಾರೆ. ಭಟ್ಕಳದ ತಂಝೀಂ ಸಂಸ್ಥೆಯಿಂದ ನೀಡಿದ ಸ್ವಯಂಪ್ರೇರಿತ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಟ್ಕಳದ ಪ್ರಮುಖ ವ್ಯಾಪಾರ ವಹಿವಾಟು ಪ್ರದೇಶವಾದ ಬರ್ಮಾ ಬಜಾರ್, ನವಾಯತ್ ಕಾಲೊನಿ ಹಾಗೂ ಮದೀನಾ ಕಾಲೊನಿ ಪ್ರದೇಶಗಳಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್‌ ಆಗಿವೆ. ಬಂದ್‌ನಿಂದ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಪಟ್ಟಣದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಜನ ಗುಂಪುಗೂಡದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

Share Post