ಹಿಜಾಬ್‌ಗೆ ಅವಕಾಶ ನೀಡದ ಹಿನ್ನೆಲೆ; ಪರೀಕ್ಷೆ ಬರೆಯದೆ ವಾಪಸ್ಸಾದ ವಿದ್ಯಾರ್ಥಿನಿಯರು
ಉಡುಪಿ; ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಮನೆಗೆ ವಾಪಸ್ಸಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಆದ್ರೆ ಹಿಜಾಬ್ ವಿವಾದದ ಕೇಂದ್ರ ಉಡುಪಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಇವತ್ತೂ ಹಿಜಾಬ್ ವಿಚಾರವಾಗಿ ಚರ್ಚೆ ನಡೆದಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರಾದ ರೇಷಂ ಮತ್ತು ಅಲಿಯಾ ಮನವಿ ಮಾಡಿದ್ದಾರೆ. ಆದ್ರೆ ಇದಕ್ಕೆ ಪ್ರಾಂಶುಪಾಲರು ಒಪ್ಪಿಲ್ಲ.
ಪರೀಕ್ಷೆ ಪ್ರಾರಂಭವಾಗಿ ಕೆಲ ಹೊತ್ತಾದರೂ ಇಬ್ಬರೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ, ಪರೀಕ್ಷೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದರು. ಆದ್ರೆ ಅಧಿಕಾರಿಗಳು ಇದಕ್ಕೆ ಒಪ್ಪಲಿಲ್ಲ. ಹೀಗಾಗಿ ಇಬ್ಬರೂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಮನೆಗೆ ವಾಪಸ್ಸಾಗಿದ್ದಾರೆ.