Districts

ಮೊರಾರ್ಜಿ ದೇಸಾಯಿ ಶಾಲೆ ಶಿಕ್ಷಕಿ ಅನುಮಾನಾಸ್ಪದ ಸಾವು

ಮೈಸೂರು; ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಿಂದಿ ಶಿಕ್ಷಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಮಹದೇಶ್ವರ ಲೇಔಟ್‌ನಲ್ಲಿ ನಡೆದಿದೆ. ನಲವತ್ತೈದು ವರ್ಷದ ಸುಲೋಚನಾ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಶಿಕ್ಷಕಿ.

ಸುಲೋಚನಾ ಅವರು ನಂಜನಗೂಡಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಮೃತಳ ಪತಿ ಸುರೇಶ್‌ ಆರು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದ್ರೆ ಕಳೆದ ರಾತ್ರಿ ಮನೆಯಲ್ಲಿ ಯಾರೂ ಇರಲಿಲ್ಲ. ಸುಲೋಚನಾ ಮಾತ್ರ ಮನೆಯಲ್ಲಿದ್ದರು. ಈ ವೇಳೆ ಅವರು ಮೃತಪಟ್ಟಿದ್ದಾರೆ. ಹೀಗಾಗಿ ಸುಲೋಚನಾ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು, ಪಿಎಸ್ ಐ ವಿಜಯಕುಮಾರ್, ವೃತ್ತ ನಿರೀಕ್ಷಕರಾದ ಲಕ್ಷ್ಮೀಕಾಂತ ತಳವಾರ ಮತ್ತು ಶಿವನಂಜಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post